ಕಾಂಗ್ರೆಸ್​​​ 4ನೇ ಪಟ್ಟಿ ಬಿಡುಗಡೆ – 7ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ…

65
firstsuddi

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದ್ದು, 7 ಅಭ್ಯರ್ಥಿಗಳಿಗೆ ಟಿಕೆಟ್​ ಘೋಷಣೆ ಮಾಡಿದೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವರಿಗೆ ನಿರೀಕ್ಷೆಯಂತೆಯೇ ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಶಿಗ್ಗಾಂವಿ ಕ್ಷೇತ್ರದಲ್ಲಿ ಮೊಹಮ್ಮದ್​ ಯೂಸುಫ್ ಸವಣೂರು ಅವರನ್ನು ಕಣಕ್ಕಿಳಿಸಲಾಗಿದೆ.

ಕಾಂಗ್ರೆಸ್ ನಾಲ್ಕನೇ ಪಟ್ಟಿಯಲ್ಲಿ ಯಾರಿಗೆಲ್ಲಾ ಟಿಕೆಟ್?

ಲಿಂಗಸುಗೂರು ಕ್ಷೇತ್ರ – ದುರ್ಗಪ್ಪ ಎಸ್. ಹೂಲಗೇರಿ, ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರ – ಜಗದೀಶ್ ಶೆಟ್ಟರ್​, ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರ – ದೀಪಕ್ ಚಿಂಚೋರೆ, ಶಿಗ್ಗಾಂವಿ ಕ್ಷೇತ್ರ – ಮೊಹಮ್ಮದ್​ ಯೂಸುಫ್ ಸವಣೂರು, ಹರಿಹರ ಕ್ಷೇತ್ರ – ನಂದಗಾವಿ ಶ್ರೀನಿವಾಸ, ಚಿಕ್ಕಮಗಳೂರು ಕ್ಷೇತ್ರ – ಹೆಚ್.ಡಿ.ತಮ್ಮಯ್ಯ, ಶ್ರವಣಬೆಳಗೊಳ ಕ್ಷೇತ್ರ – ಎಂ.ಎ. ಗೋಪಾಲಸ್ವಾಮಿಯವರಿಗೆ ಟಿಕೆಟ್ ನೀಡಿದ್ದು, ಇನ್ನೂ 8 ಕ್ಷೇತ್ರದ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿಸಿಕೊಂಡಿದೆ.

ಬಾಕಿ ಉಳಿದಿರುವ ಕ್ಷೇತ್ರಗಳು: ಶಿಡ್ಲಘಟ್ಟ, ಮುಳಬಾಗಿಲು, ಮಂಗಳೂರು ಉತ್ತರ, ಪುಲಕೇಶಿನಗರ, ರಾಯಚೂರು, ಅರಕಲಗೂಡು, ಸಿವಿ ರಾಮನ್ ನಗರ.