ಹೈಕೋರ್ಟ್ ಮೆಟ್ಟಿಲೇರಿದ ಐಶ್ವರ್ಯಾ ರೈ ಮಗಳು ಆರಾಧ್ಯ!

85
firstsuddi

ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಮೊಮ್ಮಗಳು, ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್ ಮಗಳು 11 ವರ್ಷದ ಆರಾಧ್ಯ ಬಚ್ಚನ್ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.

ತನ್ನ ಆರೋಗ್ಯದ ಬಗ್ಗೆ ಸುಳ್ಳು ಸುದ್ದಿಗಳನ್ನು ವರದಿ ಮಾಡಿದ್ದಕ್ಕಾಗಿ ಯೂಟ್ಯೂಬ್ ಟ್ಯಾಬ್ಲಾಯ್ಡ್ ವಿರುದ್ಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ತಮ್ಮ ಬಗ್ಗೆ ಈ ರೀತಿ ಸುದ್ದಿ ಪ್ರಕಟ ಆಗದಂತೆ ತಡೆ ನೀಡಬೇಕು ಎಂದು ಆರಾಧ್ಯ ಮನವಿ ಮಾಡಿದ್ದಾಳೆ. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

ಸೆಲೆಬ್ರಿಟಿಗಳ ಬಗ್ಗೆ ಅನೇಕ ವದಂತಿಗಳು ಸುದ್ದಿಯಾಗುತ್ತಲೇ ಇರುತ್ತದೆ. ಆದರೆ, ಅವರ ಮಕ್ಕಳ ಬಗ್ಗೆ ಈ ರೀತಿ ಸುಳ್ಳು ಸುದ್ದಿ ಹುಟ್ಟಿಕೊಂಡಾಗ ಅದನ್ನು ಒಪ್ಪಿಕೊಳ್ಳೋಕೆ ಬಚ್ಚನ್ ಕುಟುಂಬಕ್ಕೆ ಹಾಗೂ ಆರಾಧ್ಯಗೆ ಸಾಧ್ಯವಾಗಿಲ್ಲ. ಇದರಿಂದ ನೊಂದು ಆರಾಧ್ಯ ಕೋರ್ಟ್ ಮೆಟ್ಟಿಲೇರಿದ್ದಾಳೆ.