ಹೊತ್ತಿ ಉರಿದ ಭಾರತೀಯ ಸೇನಾ ವಾಹನ – ನಾಲ್ವರು ಯೋಧರು ಹುತಾತ್ಮ…

65
firstsuddi

ಜಮ್ಮು ಕಾಶ್ಮೀರ: ಪೂಂಜ್ ನಲ್ಲಿ ಬೆಂಕಿ ತಗುಲಿ ಭಾರತೀಯ ಸೇನಾ ವಾಹನ ಹೊತ್ತಿ ಉರಿದಿದ್ದು, ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ.

ವರದಿಗಳ ಪ್ರಕಾರ, ಪೂಂಚ್-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಸೇನಾ ವಾಹನದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇಲ್ಲಿಯವರೆಗೆ ಈ ಅಪಘಾತದಲ್ಲಿ ನಾಲ್ವರು ಸೇನಾ ಯೋಧರು ಹುತಾತ್ಮರಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ಹುತಾತ್ಮ ಯೋಧರ ಗುರುತು ಇನ್ನೂ ಪತ್ತೆಯಾಗಿಲ್ಲ.

ಬಿಜಿ ಸೆಕ್ಟರ್‌ನ ಭಟ್ಟ ದುರಿಯನ್ ಅರಣ್ಯದ ಬಳಿ ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಇಲ್ಲಿ ಉಗ್ರ ಕೃತ್ಯ ನಡೆದಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಂಡುಹಿಡಿಯಲು ಸೇನಾ ಅಧಿಕಾರಿಗಳಿಂದ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.