ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…

56
firstsuddi

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ.

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2023 ದಿನಾಂಕ ಮತ್ತು ಸಮಯವನ್ನು ಬೆಳಗ್ಗೆ 10 ಗಂಟೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಸುದ್ದಿಗೋಷ್ಟಿ ಕರೆದಿದ್ದು, ಬಳಿಕ ಫಲಿತಾಂಶ ಪ್ರಕಟಿಸಲಿದೆ.

2023 ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮಾರ್ಚ್ 9 ರಿಂದ ಮಾರ್ಚ್ 29, 2023 ರವರೆಗೆ ನಡೆಸಲಾಯಿತು. ಈ ವರ್ಷ, 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. 11 ಗಂಟೆಯ ನಂತರ ಜಾಲತಾಣ https:// karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.