ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಸ್ವೀಕೃತ…

76
firstsuddi

ಬೆಳಗಾವಿ : ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಸ್ವೀಕೃತಗೊಂಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಷ್ಠಿತ ಕ್ಷೇತ್ರವಾದ ಸವದತ್ತಿ ಯಲ್ಲಮ್ಮ ಮತಕ್ಷೇತ್ರಕ್ಕೆ ಆಯ್ಕೆ ಬಯಸಿ ಬಿಜೆಪಿಯ ರತ್ನಾ ಮಾಮನಿ ನಾಮಪತ್ರ ಸಲ್ಲಿಸಿದ್ದಾರೆ. ಆದರೆ ಸಲ್ಲಿಸಿದ ನಾಮಪತ್ರದಲ್ಲಿ ಲೋಪದೋಷಗಳಿವೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಪಕ್ಷದ ಅಭ್ಯರ್ಥಿ ಬಾಪುಗೌಡ ಚುನಾವಣಾ ಅಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿ ನಾಮಪತ್ರ ತಿರಸ್ಕರಿಸಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ರತ್ನಾ ಮಾಮನಿ ನಾಮಪತ್ರ ಸ್ವೀಕೃತಗೊಂಡಿದೆ. ಅದರಲ್ಲಿರುವ ಲೋಪದೋಷಗಳು ಯಾವುದು ಗಂಭೀರವಲ್ಲ ಎಂದು ತಿಳಿಸಿದ್ದಾರೆ.

ರತ್ನಾ ಮಾಮನಿ ವಕೀಲ ಮಾತನಾಡಿ, ಅರ್ಜಿದಾರರು ಸಲ್ಲಿಸಿದ್ದ ತಕರಾರು ಅರ್ಜಿಯಲ್ಲೂ ತಪ್ಪುಗಳಿತ್ತು ನಾವು ಅದನ್ನು ತೋರಿಸಿದ್ದೇವೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಸ್ವೀಕೃತವಾಗಿದ್ದು, ಅರ್ಜಿದಾರರು ಸಲ್ಲಿಸಿದ್ದ ತಕರಾರು ಅರ್ಜಿ ತಿರಸ್ಕೃತವಾಗಿದೆ ಎಂದು ತಿಳಿಸಿದರು.