ನಟ, ನಿರ್ದೇಶಕ ಟಪೋರಿ ಸತ್ಯ ವಿಧಿವಶ…

56
firstsuddi

ಸ್ಯಾಂಡಲ್‌ವುಡ್‌ ನಟ ಹಾಗೂ ನಿರ್ದೇಶಕ ಟಪೋರಿ ಸತ್ಯ ಅವರು ಇಂದು ವಿಧಿವಶರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು.

ಟಪೋರಿ ಚಿತ್ರದಲ್ಲಿ ನಟನಾಗಿ ಹಾಗೂ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಸತ್ಯ ಅವರು ಹಲವಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಪತ್ನಿ ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ.

ಟಪೋರಿ ಸತ್ಯ ಅವರು ನಂದ ಲವ್ಸ್ ನಂದಿತಾ ಸಿನಿಮಾ ಸೇರಿದಂತೆ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಮೇಳ’ ಎನ್ನುವ ಸಿನಿಮಾವನ್ನು ಕೂಡ ನಿರ್ದೇಶನ ಮಾಡಿದ್ದಾರೆ.

ಬನಶಂಕರಿ ಮೂರನೇ ಹಂತದಲ್ಲಿರುವ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾವಿನ ಸುದ್ದಿ ತಿಳಿದು ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.