ಕಾಂಗ್ರೆಸ್ ಮಾಜಿ ಸಚಿವ ಡಿ.ಬಿ ಇನಾಮದಾರ್ ನಿಧನ…

42
firstsuddi

ಬೆಳಗಾವಿ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಡಿ.ಬಿ ಇನಾಮದಾರ್ ಇಂದು ನಿಧನರಾಗಿದ್ದಾರೆ.

ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಡಿ.ಬಿ ಇನಾಮದಾರ್ ಕಳೆದ ಒಂದು ತಿಂಗಳಿನಿಂದಲೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ಸಾವನ್ನಪ್ಪಿದ್ದಾರೆ.

2023ರ ಚುನಾವಣೆಯಲ್ಲಿ ಡಿ.ಬಿ ಇನಾಮದಾರ್ ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅನಾರೋಗ್ಯ ಕಾರಣದಿಂದ ಅವರ ಬದಲಿಗೆ ಬಾಬಾಸಾಹೇಬ್ ಪಾಟೀಲ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿತ್ತು.

ಇನಾಮದಾರ್ 1983ರಲ್ಲಿ ಜನತಾ ಪಕ್ಷದಿಂದ ಕಿತ್ತೂರು ಕ್ಷೇತ್ರದಿಂದ ಸ್ಪರ್ಧಿಸಿ ಮೊದಲ ಬಾರಿ ಗೆಲುವು ಸಾಧಿಸಿದ್ದರು. 1994 ರಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಒಟ್ಟು 9 ಚುನಾವಣೆಗಳನ್ನ ಎದುರಿಸಿ ಐದು ಚುನಾವಣೆಗಳಲ್ಲಿ ಗೆಲುವು ದಾಖಲಿಸಿದ್ದರು. ದೇವರಾಜ ಅರಸು, ಎಸ್.ಎಂ ಕೃಷ್ಣಾ, ಎಸ್. ಬಂಗಾರಪ್ಪ ಸರ್ಕಾರದಲ್ಲಿ ಸಚಿವರಾಗಿದ್ದರು. 1983, 1985 ರಲ್ಲಿ ಜನತಾ ಪಕ್ಷದಿಂದ, 1994, 1999, 2013ರ ಕಾಂಗ್ರೆಸ್ ಪಕ್ಷದಿಂದ ಗೆಲುವು ಸಾಧಿಸಿದ್ದರು. 1989, 2004, 2008 ಹಾಗೂ 2018 ರಲ್ಲಿ ಸೋಲು ಕಂಡಿದ್ದರು.