ಲಕ್ನೋ : ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಸಂಚಲನ ಮೂಡಿಸಿದೆ.
ಟೋಲ್ ಫ್ರೀ ಸಂಖ್ಯೆ 112ಕ್ಕೆ ಸಂದೇಶ ಕಳುಹಿಸಿ ಕೊಲೆ ಬೆದರಿಕೆ ಹಾಕಲಾಗಿದ್ದು, ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸದ್ಯ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆದರಿಕೆ ಸಂದೇಶದಲ್ಲಿ ಆರೋಪಿ ಮುಖ್ಯಮಂತ್ರಿ ಯೋಗಿಯನ್ನು ಕೊಲ್ಲುವುದಾಗಿ ಬರೆದಿದ್ದಾನೆ. ಪೊಲೀಸರು ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 506 ಮತ್ತು 507 ಮತ್ತು ಐಟಿ ಕಾಯ್ದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಈ ರೀತಿ ಬೆದರಿಕೆ ಬಂದಿರುವುದು ಇದೇ ಮೊದಲಲ್ಲ, ಯೋಗಿ ಸರ್ಕಾರ ಕೈಗೊಂಡಿರುವ ಕಟ್ಟುನಿಟ್ಟಿನ ಕ್ರಮಗಳಿಂದಾಗಿ ಹಲವು ಬಾರಿ ಬೆದರಿಕೆ ಎದುರಿಸಿದ್ದಾರೆ.










