ಪಂಜಾಬ್ ಮಾಜಿ ಸಿಎಂ ಪ್ರಕಾಶ್ ಸಿಂಗ್ ಬಾದಲ್ ವಿಧಿವಶ…

70
firstsuddi

ಚಂಡೀಗಢ: ಪಂಜಾಬ್ ನ ಮಾಜಿ ಸಿಎಂ ಹಾಗೂ ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ (95) ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ.

5 ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರನ್ನು ಉಸಿರಾಟದ ತೊಂದರೆಯ ಹಿನ್ನೆಲೆಯಲ್ಲಿ ಮೊಹಾಲಿಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಪ್ರಕಾಶ್ ಸಿಂಗ್ ಬಾದಲ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಾದಲ್ ಅವರ ಅಂತಿಮ ಸಂಸ್ಕಾರ ಭಟಿಂಡದ ಬಾದಲ್ ಗ್ರಾಮದಲ್ಲಿ ನಡೆಯಲಿದೆ. ಇಂದು ಬೆಳಗ್ಗೆ ಅವರ ಪಾರ್ಥಿವ ಶರೀರವನ್ನು ಮೊಹಾಲಿಯಿಂದ ಬಾದಲ್ ಗ್ರಾಮಕ್ಕೆ ಸ್ಥಳಾಂತರಿಸಲಾಗುವುದು ಎಂದು ಅವರ ಮಗ, ಪಕ್ಷದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಮಾಹಿತಿ ನೀಡಿದ್ದಾರೆ.