ಮಂಡ್ಯ: ಯುಪಿ ಸಿಎಂ ಯೋಗಿ ಆದಿತ್ಯನಾಥ್ ರೋಡ್ ಶೋ…

58
firstsuddi

ಮಂಡ್ಯ: ವಿಧಾನಸಭಾ ಚುನಾವಣೆ ಹಿನ್ನೆಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬಿಜೆಪಿ ಪರವಾಗಿ ಪ್ರಚಾರ ಮಾಡಲು ಇಂದು ಜಿಲ್ಲೆಯಲ್ಲಿ ರೋಡ್ ಶೋ ನಡೆಸಿದರು.

ಹೆಲಿಕಾಪ್ಟರ್ ಮೂಲಕ ಆಗಮಿಸಿರುವ ಯೋಗಿ ಆದಿತ್ಯನಾಥ್ ಅವರನ್ನು ಸಚಿವ ಅಶ್ವಥ್ ನಾರಾಯಣ್, ಸಂಸದ ಪ್ರತಾಪ್ ಸಿಂಹ ಹಾಗೂ ಸಂಸದೆ ಸುಮಲತಾ ಸ್ವಾಗತಿಸಿದರು. ಅಭಿಮಾನಿಗಳು ಹಾಗೂ ಕಾರ್ಯಕರ್ತರಿಂದ ಯೋಗಿ ಮೇಲೆ ಪುಷ್ಪವೃಷ್ಟಿ ಮಾಡಲಾಯಿತು.
ಸಂಜಯ್ ವೃತ್ತದಿಂದ ಯೋಗಿ ರೋಡ್ ಶೋ ಆರಂಭಿಸಿ, ತೆರದ ವಾಹನದಲ್ಲಿ ನಿಂತು ಜನರತ್ತ ಕೈ ಬೀಸಿದರು.

ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ 500 ಮೀಟರ್ ರೋಡ್ ಶೋ ಸಂಜಯ್ ವೃತ್ತದಿಂದ ಮಹಾವೀರ ವೃತ್ತದವರೆಗೆ ಸಾಗಿ ಕೊನೆಗೊಂಡಿತು.