ಮದ್ಯ ಸೇವಿಸಲು ಹಣ ನೀಡದ್ದಕ್ಕೆ ತಂದೆಯನ್ನೇ ಕೊಂದ ಪಾಪಿ ಮಗ…

74
firstsuddi

ಬೆಂಗಳೂರು: ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಮಗನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಗೋವಿಂದರಾಜನಗರದ ಮಾರೇನಹಳ್ಳಿಯಲ್ಲಿ ನಡೆದಿದೆ.

ಸೆಕ್ಯೂರಿಟಿಗಾರ್ಡ್ ಬಸವರಾಜು(60) ಕೊಲೆಯಾದ ದುರ್ದೈವಿ. ಆಟೋ ಚಾಲಕನಾಗಿದ್ದ ಮಗ ನೀಲಾಧರ ಕೊಲೆ ಆರೋಪಿಯಾಗಿದ್ದಾನೆ. ಮಾರೇನಹಳ್ಳಿ ಪಿಎಸ್ ಬಡಾವಣೆಯ ಶೆಡ್‌ವೊಂದರಲ್ಲಿ ಕೊಲೆಯಾದ 15 ದಿನಗಳ ನಂತರ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡ ಗೋವಿಂದರಾಜನಗರದ ಪೊಲೀಸರಿಗೆ ಮಗನಿಂದಲೇ ತಂದೆ ಕೊಲೆಯಾಗಿರುವುದು ತಿಳಿದು ಬಂದಿದೆ.

ಸದ್ಯ ಆರೋಪಿಯನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ನೀಲಾಧರ ತನ್ನ ತಂದೆ ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಅನ್ನೋ ಕಾರಣಕ್ಕೆ ಇಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.