ತೆಲುಗು ಕೊರಿಯೋಗ್ರಾಫರ್ ಚೈತನ್ಯ ಆತ್ಮಹತ್ಯೆಗೆ ಶರಣು…

63
firstsuddi

ತೆಲುಗು ಸಿನಿಮಾ ರಂಗದ ಖ್ಯಾತ ಕೊರಿಯೋಗ್ರಾಫರ್ ಚೈತನ್ಯ ಅವರು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಕಷ್ಟು ಸಾಲ ಮಾಡಿಕೊಂಡಿದ್ದ ಅವರಿಗೆ ಹಣವನ್ನು ತೀರಿಸಲು ಸಾಧ್ಯವಾಗಿಲ್ಲ. ಈ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಚೈತನ್ಯ ಅವರು ಆಂಧ್ರಪ್ರದೇಶದ ನೆಲ್ಲೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚೈತನ್ಯ ಅವರು ಸಾಯುವುದಕ್ಕೂ ಮುನ್ನ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೊವೊಂದನ್ನು ಶೇರ್ ಮಾಡಿಕೊಂಡಿದ್ದರು.

‘ನನ್ನ ತಂದೆ ತಾಯಿ ಹಾಗೂ ಸಹೋದರಿ ಚೆನ್ನಾಗಿ ನೋಡಿಕೊಂಡರು. ನನ್ನ ಎಲ್ಲಾ ಸ್ನೇಹಿತರಿಗೆ ಪ್ರಾಮಾಣಿಕ ಕ್ಷಮೆಯಾಚಿಸುತ್ತೇನೆ. ನಾನು ಅನೇಕ ಜನರಿಗೆ ತೊಂದರೆ ನೀಡಿದ್ದೇನೆ. ಅವರೆಲ್ಲರ ಬಳಿ ಕ್ಷಮೆಯಾಚಿಸುತ್ತೇನೆ. ನಾನು ಅನಿವಾರ್ಯ ಕಾರಣಗಳಿಂದಾಗಿ ಸಾಲ ಮಾಡಿಕೊಂಡೆ. ಅದನ್ನು ತೀರಿಸಲು ಕಷ್ಟವಾಯಿತು. ಹಾಗಾಗಿ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದೇನೆ. ನಾನು ನೆಲ್ಲೂರಿನಲ್ಲಿ ಇದ್ದೇನೆ. ಇದು ನನ್ನ ಕೊನೆಯ ದಿನ’ ಎಂದು ವೀಡಿಯೊದಲ್ಲಿ ಹೇಳಿದ್ದಾರೆ.

ತೆಲುಗಿನ ಜನಪ್ರಿಯ ಡ್ಯಾನ್ಸ್ ಶೋ ‘ಢೀ’ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದರು. ಚೈತನ್ಯ ಸಾವಿಗೆ ಹಲವರು ಕಂಬನಿ ಮಿಡಿದಿದ್ದಾರೆ.