ಸೇನಾ ಹೆಲಿಕಾಪ್ಟರ್ ಪತನ- ಮೂವರಿಗೆ ಗಾಯ…

60
firstsuddi

ಜಮ್ಮು ಮತ್ತು ಕಾಶ್ಮೀರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನಗೊಂಡು ಮೂವರಿಗೆ ಗಾಯಗಳಾಗಿರುವ ಘಟನೆ ಇಂದು ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಮಚ್ನಾ ಗ್ರಾಮದ ಬಳಿ ಸೇನೆಯ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ. ಹೆಲಿಕಾಪ್ಟರ್ ಪತನದಿಂದಾಗಿ ಗಾಯಗೊಂಡ ಪೈಲಟ್‌ಗಳನ್ನು ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ಸದ್ಯ ಅವರು ಸುರಕ್ಷಿತರಾಗಿದ್ದಾರೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.