ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಸಾರ್ವಜನಿಕ ಸಂಚಾರಕ್ಕೆ ಮೇ 9 ಮತ್ತು 10 ರಂದು ಕರ್ನಾಟಕ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಮೇ 9 ಮತ್ತು 10ರಂದು ಎಂದಿನಂತೆ ಕೆಎಸ್ಆರ್ಟಿಸಿ ಬಸ್ಸುಗಳ ಸೇವೆ ಸಾಕಷ್ಟು ಸಂಖ್ಯೆಯಲ್ಲಿ ರಾಜ್ಯಾದ್ಯಂತ ಇರುವುದಿಲ್ಲ. ಪ್ರಯಾಣಿಕರು ಸಹಕರಿಸಬೇಕೆಂದು ಪ್ರಕಟಣೆ ಮೂಲಕ ಕೆಎಸ್ಆರ್ಟಿಸಿ ಮನವಿ ಮಾಡಿದೆ.
ರಾಜ್ಯದಲ್ಲಿ ಒಟ್ಟು 8100 ಕೆಎಸ್ಆರ್ಟಿಸಿ ಬಸ್ಗಳಿದ್ದು, ಈ ಪೈಕಿ 3700 ಬಸ್ಗಳು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾಗಿವೆ. ಮೇ 9 ಮತ್ತು 10 ರಂದು 4400 ಕೆಎಸ್ಆರ್ಟಿಸಿ ಬಸ್ಗಳು ಮಾತ್ರ ಸಂಚಾರ ಮಾಡುತ್ತವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ ಎರಡು ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.










