ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ಹೆಬ್ಬಾಳೆ ಸೇತುವೆ ವರ್ಷದಿಂದ ವರ್ಷಕ್ಕೆ ತನ್ನ ಸಾಮಥ್ರ್ಯ ಕಳೆದುಕೊಳ್ತಿದೆ.

1056
kalalsa rain
firstsuddi kalasa

ಫಸ್ಟ್ ಸುದ್ದಿ – ಈ ಮಳೆಗಾಲ ಮುಗಿದ್ ತಕ್ಷಣ ಅದಕ್ಕೊಂದು ಶಾಶ್ವತ ಪರಿಹಾರ ಮಾಡ್ತೀವಿ ಅಂತ ಜನಪ್ರತಿನಿಧಿಗಳು, ಸರ್ಕಾರ ಹೇಳ್ತಾ ಬರೋಬ್ಬರಿ 25ವರ್ಷಗಳೇ ಕಳೆದಿವೆ. ಆದ್ರು ಆ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಮಳೆಗಾಲದಲ್ಲಿ ದಿನಕ್ಕೆ ನಾಲ್ಕೈದು ಬಾರಿ ಮುಳುಗಡೆಯಾಗೋ ಸೇತುವೆಯಿಂದ ಅಲ್ಲಿಯ ಜನ ಅಲ್ಲೇ, ಇಲ್ಲಿಯ ಜನ ಇಲ್ಲೆ. ರಾಜಕಾರಣಿಗಳು, ಸರ್ಕಾರದ ಆಶ್ವಾಸನೆಯಿಂದ ಬೆಂದು ಬೆಂಡಾಗಿರೋ ಜನಸಾಮಾನ್ಯರು ಸರ್ಕಾರದವಿರುದ್ಧ ಇಡಿಶಾಪ ಹಾಕ್ತಿದ್ದಾರೆ. ಇವ್ರಿಗೆಲ್ಲಾ ಹೊರನಾಡು ಅನ್ನಪೂರ್ಣೇಶ್ವರಿಯೇ ಬುದ್ಧಿ ಕೊಡ್ಬೇಕು……

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹೆಬ್ಬಾಳೆ ಸೇತುವೆ. ಮಳೆಗಾಲದಲ್ಲಿ ಸೇತುವೆ ಮೇಲೆ ನಾಲ್ಕೈದು ಅಡಿ ಎತ್ತರದಲ್ಲಿ ನೀರು ಹರಿಯೋ ಈ ಸೇತುವೆ ದಿನದಲ್ಲಿ ನಾಲ್ಕೈದು ಬಾರಿ ಮುಳುಗುತ್ತೆ. ಈ ವರ್ಷವಂತೂ ಒಂದೇ ತಿಂಗಳಲ್ಲಿ 12ಕ್ಕೂ ಹೆಚ್ಚು ಬಾರಿ ಮುಳುಗಿದೆ. ಕಳೆದ 25 ವರ್ಷಗಳಿಂದ್ಲು ಇದು ನಿರಂತರ ಕ್ರಿಯೆ. ಬೇಸಿಗೆ ಬಂದಾಗ ಸೇತುವೆ  ಮಾಡ್ತೀವಿ ಅನ್ನೋ ಜನನಾಯಕರು 25 ವರ್ಷಗಳಿಂದ ಚುನಾವಣೆಗಳನ್ನ ದೂಡ್ತಿದ್ದಾರೆ. ಈ ಸೇತುವೆ ಮುಳುಗಡೆಯಾದ್ರೆ, ಯಾವ ವಾಹನವೂ ಸಂಚರಿಸುವಂತಿಲ್ಲ. ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಬರೋ ಹೊರ ರಾಜ್ಯ, ಜಿಲ್ಲೆಯ ವಾಹನಗಳು ರಾತ್ರಿ ವೇಳೆ, ಈ ಸೇತುವೆ ಮೇಲೆ ನೀರಲ್ಲಿ ತೊಯ್ದು ನಿಂತ ಉದಾಹರಣೆಗಳಿವೆ. ಆದ್ರೆ, ಈವರೆಗೂ ಕೂಡ ಸಂಬಂಧಪಟ್ಟೋರ್ಗೆ ಬೇಸಿಗೆನೆ ಬಂದಿಲ್ಲ. ಆದ್ರೀಗ, ನೀರಿನಲ್ಲಿ ತೊಯ್ದ ಈ ಸೇತುವೆ ಸಂಪೂರ್ಣ ಶಿತಿಲಾವಸ್ಥೆ ತಲುಪಿದ್ದು, ಅವನತಿಯ ಅಂಚಿನಲ್ಲಿದೆ. ಒಂದು ವೇಳೆ ಕುಸಿದು ಬಿದ್ರೆ ಆಗೋ ಅನಾಹುತ ದೊಡ್ಡ ಪ್ರಮಾಣದ್ದಾಗಿರುತ್ತೆ.

ಫಸ್ಟ್ ಸುದ್ದಿಯೊಂದಿಗೆ ಮಾತನಾಡಿದ ಸ್ಥಳೀಯರಾದ ಸತ್ಯಾನಂದ ಅವರು ಈ ಸೇತುವೆಗೆ ಯಾವುದೇ ತಡೆಗೋಡೆಗಳಿಲ್ಲ. ರಾತ್ರಿ ವೇಳೆ, ವಾಹನ ಸ್ವಲ್ಪ ಜಾರಿದ್ರು ಕೂಡ ನದಿ ಪಾಲಾಗೋದ್ರಲ್ಲಿ ಎರಡು ಮಾತಿಲ್ಲ. ಈ ಮಾರ್ಗವಾಗಿ ಹೊರನಾಡಿನ ಅನ್ನಪೂರ್ಣೇಶ್ವರಿ ದರ್ಶನ ಪಡೆಯೋಕೆ ಹೋಗೋ ಪ್ರವಾಸಿಗರೇ ಹೆಚ್ಚು. ರಸ್ತೆ ಹಾಗೂ ಕರ್ವ್ ಪರಿಚಯವಿರೋ ಚಾಲಕರಾದ್ರೆ ಓಕೆ. ಹೊಸಬರಾದ್ರೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಮಾರ್ಗ ನೀರಿನಲ್ಲಿ ಮುಳುಗುದ್ರೆ ಸುಮಾರು 15 ರಿಂದ 20 ಕಿ.ಮೀ. ಸುತ್ತಿಕೊಂಡು ದೇಗುಲಕ್ಕೆ ಹೋಗಬೇಕಾಗುತ್ತೆ. ಮಳೆಗಾಲದಲ್ಲಿ ಬೇರೆ ಮಾರ್ಗವಿಲ್ಲದೇ ರೋಗಿಗಳು ಕೂಡ ಸಂಕಷ್ಟಕ್ಕೀಡಾಗಿದ್ದಾರೆ. ರಾಜಕಾರಣಿಗಳು ಹಾಗೂ ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯದಿಂದ ಈ ಸೇತುವೆ ವರ್ಷದಿಂದ ವರ್ಷಕ್ಕೆ ತನ್ನ ಸಾಮಥ್ರ್ಯ ಕಳೆದುಕೊಳ್ತಿದೆ. 20 ವರ್ಷದಿಂದ ಜನರ ಸಮಸ್ಯೆಯೊಂದು ಅರ್ಥವಾಗದ ಇಲ್ಲಿನ ಜಡ್ಡು ಹಿಡಿದ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಹೊರನಾಡು ಅನ್ನಪೂರ್ಣೇಶ್ವರಿಯೇ ಬುದ್ದಿ ಕೊಡಬೇಕು ಅಂತಾರೆ.