ದೇಶದಲ್ಲಿ 1,688 ಕೊರೊನಾ ಸೋಂಕಿತರು ಪತ್ತೆ – ಸೋಂಕಿತರ ಸಂಖ್ಯೆ 4,49,76,599ಕ್ಕೆ ಏರಿಕೆ…

55
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,688 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 4,49,76,599ಕ್ಕೆ ಏರಿಕೆಯಾಗಿದೆ. ನಿನ್ನೆ ಕೊರೊನಾ ಸೋಂಕಿನಿಂದ 12 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,31,736 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 4,49,76,599 ಮಂದಿ ಸೋಂಕಿತರ ಪೈಕಿ ಈವರೆಗೆ 4,44,25,250 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.