ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟ…

46
firstsuddi

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್ಇ) 12ನೇ ತರಗತಿಯ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದೆ.

ಫೆಬ್ರವರಿ 15 ರಿಂದ ಏಪ್ರಿಲ್ 5, 2023 ರವರೆಗೆ ನಡೆದ ಸಿಬಿಎಸ್ಇ 12ನೇ ತರಗತಿ ಪರೀಕ್ಷೆಗೆ ಸುಮಾರು 16.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಒಟ್ಟು ಶೇಕಡಾ 87.33 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕೇರಳದ ತಿರುವನಂತಪುರಂ ಶೇಕಡಾ 99.91 ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದೆ.

ವಿದ್ಯಾರ್ಥಿಗಳು ಸಿಬಿಎಸ್ಇ ಫಲಿತಾಂಶವನ್ನು  cbseresults.nic.in ಅಧಿಕೃತ ವೆಬ್‌ಸೈಟ್‌ ನಲ್ಲಿ ವೀಕ್ಷಿಸಬಹುದು.