ಮೂಡಿಗೆರೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ.

91
firstsuddi

ಮೂಡಿಗೆರೆ: ಮೀಸಲು ಕ್ಷೇತ್ರ ಮೂಡಿಗೆರೆಯಲ್ಲಿ ನಯನಾ ಮೋಟಮ್ಮ, ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಮೂಡಿಗೆರೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಬಿಜೆಪಿ ಹಾಗೂ ಕಾಂಗ್ರೆಸ್ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ ಬಿಜೆಪಿ ಹಾಲಿ ಶಾಸಕ ಎಂಪಿ ಕುಮಾರಸ್ವಾಮಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದಾರೆ. ಬಿಜೆಪಿಯು ದೀಪಕ್ ದೊಡ್ಡಯ್ಯ ಅವರಿಗೆ ಟಿಕೆಟ್ ನೀಡಿದೆ. ಈ ಕ್ಷೇತ್ರವನ್ನು ಹಿಂದೆ ಪ್ರತಿನಿಧಿಸಿದ್ದ ಮಾಜಿ ಸಚಿವೆ ಮೋಟಮ್ಮ ಅವರ ಪುತ್ರಿ ನಯನಾ ಮೋಟಮ್ಮ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ.