ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸಾವು…

44
firstsuddi

ಮಂಡ್ಯ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರೈಲು ನಿಲ್ದಾಣದಲ್ಲಿ ನಡೆದಿದೆ.

ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ ಅಪರಿಚಿತ ಮಹಿಳೆ ಪ್ಲಾಟ್‌ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು. ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮಹಿಳೆಯ ಮೃತದೇಹವನ್ನು ಮಿಮ್ಸ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.