ಹೃದಯಾಘಾತಕ್ಕೀಡಾಗಿ ನಿಧನರಾದ ಖ್ಯಾತ ನೇತ್ರ ತಜ್ಞ ಡಾ.ಕೆ. ಭುಜಂಗ ಶೆಟ್ಟಿಯವರಿಂದಲೂ ನೇತ್ರದಾನ…

44
firstsuddi

ಬೆಂಗಳೂರು: ನಾರಾಯಣ ನೇತ್ರಾಲಯದ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ.ಕೆ. ಭುಜಂಗ ಶೆಟ್ಟಿ(69) ಅವರು ನಿನ್ನೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೇತ್ರದಾನ ಮಾಡುವ ಮೂಲಕ ಭುಜಂಗ ಶೆಟ್ಟಿಯವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಎಂದಿನಂತೆ ನಿನ್ನೆ ಕೂಡ ಆಸ್ಪತ್ರೆಗೆ ಹೋಗಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಕೆ. ಭುಜಂಗ ಶೆಟ್ಟಿ ಅವರು ಆಸ್ಪತ್ರೆಯಿಂದ ಮನೆಗೆ ವಾಪಸಾದ ವೇಳೆ ತೀವ್ರ ಹೃದಯಾಘಾತ ಉಂಟಾಗಿತ್ತು. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ನಿನ್ನೆ ತಡರಾತ್ರಿ ಡಾ. ರಾಜ್ ಕುಮಾರ್ ಕಣ್ಣಿನ ಬ್ಯಾಂಕ್ ಗೆ ನೇತ್ರದಾನ ಮಾಡಲಾಗಿದೆ. ನೇತ್ರದಾನದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದ ಡಾ.ಕೆ. ಭುಜಂಗ ಶೆಟ್ಟಿ ಅವರು ತಮ್ಮ ಕಣ್ಣುಗಳನ್ನೂ ದಾನ ಮಾಡಿ ಕಣ್ಣಿಲ್ಲದವರಿಗೆ ಬೆಳಕಾಗಿದ್ದಾರೆ.

ಡಾ.ಕೆ. ಭುಜಂಗ ಶೆಟ್ಟಿ ಅವರು ವರನಟ ಡಾ. ರಾಜ್‌ಕುಮಾರ್‌, ಡಾ. ಪುನೀತ್ ರಾಜ್‌ಕುಮಾರ್‌ ಸೇರಿದಂತೆ ಹಲವರ ನೇತ್ರದಾನ ಪ್ರಕ್ರಿಯೆಯಲ್ಲಿ ಮಹತ್ವದ ಪಾತ್ರವಹಿಸಿದ್ದರು. ನೇತ್ರದಾನದ ಬಗ್ಗೆ ರಾಜ್ಯಾದ್ಯಂತ ಜಾಗೃತಿ ಮೂಡಿಸಿದ್ದರು.