ಬೆಂಗಳೂರು: ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ.
ಜೂನ್ 12ರಿಂದ ಜೂನ್ 19ರವರೆಗೆ ಪರೀಕ್ಷೆಗಳು ನಡೆಯಲಿವೆ. ಬಹುತೇಕ ಎಲ್ಲ ಪರೀಕ್ಷೆಗಳು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45ರವರೆಗೆ ನಡೆಯಲಿದೆ.
2022-23ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ. 8ರಂದು ಪ್ರಕಟಗೊಂಡಿತ್ತು. ಈ ಪರೀಕ್ಷೆಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ. 15ರ ವರೆಗೆ ಅವಕಾಶ ನೀಡಲಾಗಿತ್ತು.
ಪೂರಕ ಪರೀಕ್ಷಾ ವೇಳಾಪಟ್ಟಿ ಇಂತಿವೆ:
ಜೂ.12- ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ).
ಜೂ.13- ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ.
ಜೂ.14- ದ್ವಿತೀಯ ಭಾಷೆ (ಇಂಗ್ಲಿಷ್ ಮತ್ತು ಕನ್ನಡ).
ಜೂ.15- ಸಮಾಜ ವಿಜ್ಞಾನ.
ಜೂ.16- ತೃತೀಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು).
ಜೂ.17- ಗಣಿತ.
ಜೂ.19- ಅರ್ಥಶಾಸ್ತ್ರ (ಇತರೆ ಕೋರ್ ವಿಷಯಗಳು).










