ತುಮಕೂರು: ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ.
ವೀರೇಶ್ (30), ಶಶಿಕಲಾ (69) ಮೃತ ರ್ದುದೈವಿಗಳು. ಇನ್ನು ಮೃತರು ರಾಯಚೂರು ಜಿಲ್ಲೆಯ ಸಿಂಧನೂರಿನವರು ಎಂದು ತಿಳಿದು ಬಂದಿದೆ. ದಿಲೀಪ್ ಕುಮಾರ್, ಆನಂದ್ ಕುಮಾರ್, ಪ್ರಿಯಾ, ಪ್ರತೀಕ್ಷಾ ಎಂಬುವವರು ಗಾಯಗೊಂಡಿದ್ದು, ಗಾಯಾಳುಗಳಿಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಶಿಕಲಾ ಕುಟುಂಬದವರು ಸಿಂಧನೂರಿನಿಂದ ಮೈಸೂರಿಗೆ ಪ್ರವಾಸಕ್ಕೆ ಹೊರಟಿದ್ದ ವೇಳೆ ಮಾರ್ಗ ಮಧ್ಯೆ ಡಿ.ಹೊಸಹಳ್ಳಿ ಬಳಿ ನಿಂತಿದ್ದ ಖಾಸಗಿ ಬಸ್‌ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಟಿಟಿ ಚಾಲಕ ವೀರೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಶಶಿಕಲಾ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ಕುರಿತು ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










