ಮೂಡಿಗೆರೆ : ಮೇ.29ರ ನಾಳೆಯಿಂದ ರಾಜ್ಯಾಧ್ಯಂತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭವಾಗಲಿವೆ. ಈಗಾಗಲೇ ಕೆಲ ಖಾಸಗಿ ಶಾಲೆಗಳು ಆರಂಭಗೊಂಡಿದ್ದು, ಅಧಿಕೃತವಾಗಿ ಮೇ.29ರ ಸೋಮವಾರದ ನಾಳೆಯಿಂದ ಸರ್ಕಾರಿ, ಅನುದಾನಿತ ಶಾಲೆಗಳು ತೆರೆಯಲಿದೆ.2023-24ನೇ ಸಾಲಿನಲ್ಲಿ ಶಾಲೆಗಳನ್ನು ಆರಂಭಿಸಲು ಶಾಲಾ ಶಿಕ್ಷಣ ಇಲಾಖೆಯು ಮೇ.29ರ ದಿನಾಂಕವನ್ನು ನಿಗದಿ ಪಡಿಸಿತ್ತು. ಅದರಂತೆ ಶಾಲೆಗಳ ಆರಂಭಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ತಳಿರು-ತೋರಣಗಳಿಂದ ಶಾಲೆಗಳನ್ನು ಸಿಂಗಾರಗೊಳಿಸಲಾಗಿದ್ದು, ಮಕ್ಕಳಿಗೆ ಸಿಹಿ ಹಂಚಿ ಆದರದಿಂದ ಬರ ಮಾಡಿಕೊಳ್ಳಲು ಶಿಕ್ಷಕರು ಸಿದ್ಧರಾಗಿದ್ದಾರೆ.










