ವೇದಿಕೆಯ ಮೇಲೆ ಎಡವಿ ಬಿದ್ದ ಅಮೆರಿಕ ಅಧ್ಯಕ್ಷ ಜೋ ಬೈಡನ್- ವೀಡಿಯೋ ವೈರಲ್…

47
firstsuddi

ವಾಷಿಂಗ್ಟನ್: ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್‌ನಲ್ಲಿ ನಡೆದ ಏರ್‌ಫೋರ್ಸ್‌ ಅಕಾಡೆಮಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಅಮೆರಿಕದ ಅಧ್ಯಕ್ಷ ಜೋ ಬೈಡನ್ ವೇದಿಕೆಗೆ ಆಗಮಿಸುತ್ತಿದ್ದಂತೆ ಎಡವಿ ಬಿದ್ದಿದ್ದಾರೆ. ಈ ಕುರಿತ ವೀಡಿಯೋ ವೈರಲ್ ಆಗಿದೆ.

ಯುಎಸ್ ಏರ್ ಫೋರ್ಸ್ ಅಕಾಡೆಮಿಯಲ್ಲಿ ಭಾಷಣ ಮಾಡಿದ ನಂತರ ಯುಎಸ್ ಅಧ್ಯಕ್ಷ ಜೋ ಬೈಡನ್ ಅವರು ಕೆಡೆಟ್‌ಗಳೊಂದಿಗೆ ಹಸ್ತಲಾಘವ ಮಾಡಿದರು. ಬಳಿಕ ಮುಂದಿನ ಹೆಜ್ಜೆ ಇಟ್ಟ ತಕ್ಷಣ ಕಾಲು ತಡವರಿಸಿ ಬಿದ್ದಿದ್ದಾರೆ, ಕೂಡಲೇ ಏರ್‌ಫೋರ್ಸ್‌ ಅಧಿಕಾರಿಗಳು ಎದ್ದೇಳಲು ಸಹಕರಿಸಿದ್ದಾರೆ. ಎಡವಿ ಬಿದ್ದ 80 ವರ್ಷದ ಬೈಡನ್, ಬಳಿಕ ಡಿಪ್ಲೊಮಾ ಕೆಡೆಟ್‌ಗಳಿಗೆ ಪದವಿ ಪ್ರದಾನಮಾಡಿ, ವೇದಿಕೆಯಿಂದ ಹೊರಗುಳಿದಿದ್ದಾರೆ. ನಂತರ ಅಲ್ಲಿಂದ ಕ್ಷೇಮವಾಗಿ ನಡೆದುಕೊಂಡು ಶ್ವೇತ ಭವನಕ್ಕೆ ತೆರಳಿದರು. ಸದ್ಯ ಅಧ್ಯಕ್ಷರು ಗಾಯಗೊಂಡಿಲ್ಲ, ಫಿಟ್ ಆಗಿದ್ದಾರೆ ಎಂಬುದಾಗಿ ಶ್ವೇತಭವನದ ಸಂವಹನ ವಿಭಾಗದ ನಿರ್ದೇಶಕ ಬೆನ್ ಲಾಬೋಲ್ಟ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಬೈಡನ್ ಇತ್ತೀಚೆಗೆ ಜಪಾನ್‌ನಲ್ಲಿ ನಡೆದ ಉ7 ಶೃಂಗಸಭೆಯಲ್ಲೂ ಎಡವಿದ್ದರು, ಹಿರೋಷಿಮಾದ ಇಟ್ಸುಕುಶಿಮಾ ದೇಗುಲದಲ್ಲಿ ಸಣ್ಣ ಮೆಟ್ಟಿಲುಗಳಲ್ಲಿ ಅವಸರದಿಂದ ಹೋಗುತ್ತಿದ್ದಾಗಲೂ ಎಡವಿ ಬಿದ್ದಿದ್ದರು. ಆದ್ರೆ ಸ್ವತಃ ಮೇಲೆದ್ದಿದ್ದರು. ಇದೀಗ 3ನೇ ಬಾರಿ ಬೈಡನ್ ಎಡವಿ ಬಿದ್ದಿದ್ದಾರೆ.