ಹಸೆಮಣೆ ಏರಬೇಕಿದ್ದ ಯುವಕನ ಬರ್ಬರ ಹತ್ಯೆ…

43
firstsuddi

ಹುಬ್ಬಳ್ಳಿ: ಹಸೆಮಣೆ ಏರಬೇಕಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ.

ನಿಂಗಪ್ಪ ಬೂದಪ್ಪ ನವಲೂರ (28) ಕೊಲೆಯಾದ ಯುವಕ. ಮೃತ ಯುವಕನಿಗೆ ಜೂನ್ 7 ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಿಯವಾಗಿತ್ತು. ನಿಂಗಪ್ಪ ತೋಟದ ಮನೆಯಲ್ಲಿದ್ದಾಗ ಮಧ್ಯರಾತ್ರಿ ದಾಳಿ ಮಾಡಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ, ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.