ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ ಕೆಎಸ್‍ಆರ್‌ಟಿಸಿ ಸ್ಲೀಪರ್ ಕೋಚ್ ಬಸ್ ಗೆ ದಂತದಿಂದ ತಿವಿದ ಕಾಡಾನೆ…

65
firstsuddi

ಮಂಗಳೂರು: ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‍ಆರ್‌ಟಿಸಿ ಸ್ಲೀಪರ್ ಕೋಚ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪ ನಿನ್ನೆ ತಡರಾತ್ರಿ ನಡೆದಿದೆ.

ಬಸ್ ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿತ್ತು. ಬಸ್ ಚಾಲಕ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಬಸ್ಸಿನ ಎಡಭಾಗಕ್ಕೆ ಆನೆ ತನ್ನ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.