ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ- ಐವರು ಸ್ಥಳದಲ್ಲೇ ಸಾವು…

72
firstsuddi

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ಎ ನಲ್ಲಿ ನಡೆದಿದೆ.

ಮುನೀರ್(40), ನಯಾಮತ್ (40), ಮುದ್ದಸಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಮೃತ ದುರ್ದೈವಿಗಳು. ಮೃತಪಟ್ಟ 5 ಮಂದಿ ಸಂಬಂಧಿಕರಾಗಿದ್ದಾರೆ. ಆಂಧ್ರಪ್ರದೇಶದ ಬಂಡಿ ಆತ್ಮಕೂರು ಗ್ರಾಮದ ತಂದೆ ಮುನೀರ್ ಹಾಗೂ ಪುತ್ರ ಮುದ್ದಸಿರ್ ಇಬ್ಬರೂ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವೆಲುಗೋಡ ಗ್ರಾಮದ ಮೂವರು ಸಾವನ್ನಪ್ಪಿದ್ದಾರೆ.

ಕ್ರೂಸರ್, ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ಬರುತ್ತಿತ್ತು. ಈ ವೇಳೆ ಬಳಿಚಕ್ರ ಬಳಿ ರಸ್ತೆ ಪಕ್ಕ ನಿಲ್ಲಿಸಿದ್ದ ಲಾರಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಓರ್ವ ಬಾಲಕಿ, ಬಾಲಕ ಸೇರಿ ಒಟ್ಟು 5 ಮಂದಿ ಮೃತಪಟ್ಟಿದ್ದಾರೆ. ನಿದ್ದೆ ಮಂಪರಿನಲ್ಲಿದ್ದ ಕ್ರೂಸರ್ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ 13 ಜನರಿಗೆ ಗಾಯಗಳಾಗಿದ್ದು, ಅವರನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಸಂಬಂಧ ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.