ಶ್ರೀನಗರ: ಪಾಕಿಸ್ತಾನದ ಇಂಟರ್ನ್ಯಾಷನಲ್ ಏರ್ಲೈನ್ಸ್ ಚಿಹ್ನೆ ಇರುವ ವಿಮಾನ ಆಕಾರದ ನಿಗೂಢ ಬಲೂನ್ ಇಂದು ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಪತ್ತೆಯಾಗಿದೆ.
ಕಪ್ಪು ಬಿಳುಪು ಬಣ್ಣದ ನಿಗೂಢ ಬಲೂನ್ ನೆಲದ ಮೇಲೆ ಬಿದ್ದಿರುವುದು ಕಂಡು ಬಂದಿದೆ. ಭದ್ರತಾ ಪಡೆಗಳು ಅದನ್ನು ವಶಪಡಿಸಿಕೊಂಡಿವೆ. ಬಲೂನ್ ಮೂಲವನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.
ಕಳೆದ ಫೆಬ್ರವರಿಯಲ್ಲಿ ಇದೇ ರೀತಿಯ ವಿಮಾನ ಆಕಾರದ ಹಸಿರು ಮತ್ತು ಬಿಳಿ ಬಲೂನ್ ಶಿಮ್ಲಾದಲ್ಲಿ ಪತ್ತೆಯಾಗಿತ್ತು. ಅದರ ಮೇಲೆ ಸಹ ಪಿಐಎ ಲೋಗೋವನ್ನು ಮುದ್ರಿಸಲಾಗಿತ್ತು. ಮೇ 20 ರಂದು ಅಮೃತಸರದಲ್ಲಿ ಮಾದಕ ವಸ್ತುಗಳನ್ನು ಹೊಂದಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಸೇನೆ ಹೊಡೆದುರುಳಿಸಿತ್ತು.
ಅಲ್ಲದೇ ಇತ್ತೀಚೆಗೆ ಸೇನೆ ನಾಲ್ಕು ಪಾಕಿಸ್ತಾನಿ ಡ್ರೋನ್ಗಳನ್ನು ಗಡಿಯಲ್ಲಿ ತಡೆದಿತ್ತು. ಅವುಗಳಲ್ಲಿ ಮೂರು ಡ್ರೋನ್ಗಳನ್ನು ಬಿಎಸ್ಎಫ್, ಪಂಜಾಬ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಹೊಡೆದುರುಳಿಸಿತ್ತು.










