ಬೀದಿನಾಯಿಗಳ ದಾಳಿಯಿಂದ 3 ವರ್ಷದ ಬಾಲಕನಿಗೆ ಗಂಭೀರ ಗಾಯ…

65
firstsuddi

ತೆಲಂಗಾಣ: 3 ವರ್ಷದ ಮಗುವಿನ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಗಂಭೀರ ಗಾಯಗಳಾಗಿರುವ ಘಟನೆ ರಾಜ್ಯದ ಕಾಮರೆಡ್ಡಿ ಗಾಂಧಾರಿ ಮಂಡಲದ ಮುಧೋಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಫಂಕ್ಷನ್ ಹಾಲ್‌ನ ಹೊರಗಡೆ ಆಟವಾಡುತ್ತಿದ್ದ ಬಾಲಕನ ಮೇಲೆ ನಾಯಿಗಳು ಏಕಾಏಕಿ ದಾಳಿ ಮಾಡಿದೆ.

ಬಾಲಕ ನೋವಿನಿಂದ ನರಳುತ್ತಿದ್ದುದನ್ನು ಕಂಡ ಸ್ಥಳೀಯರು ಹೇಗೋ ನಾಯಿಯನ್ನು ದೂರ ಸರಿಸಿ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಾಲಕನ ತಲೆ ಮತ್ತು ಹೊಟ್ಟೆಗೆ ಗಾಯಗಳಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಇಷ್ಟಾದರೂ ಘಟನೆಯ ಬಗ್ಗೆ ಪೊಲೀಸರು ಮತ್ತು ಪುರಸಭೆಯ ಅಧಿಕಾರಿಗಳು ಯಾವುದೇ ಹೇಳಿಕೆ ನೀಡಿಲ್ಲ.

ತೆಲಂಗಾಣದಲ್ಲಿ ಮಕ್ಕಳ ಮೇಲೆ ನಾಯಿ ದಾಳಿ ಮಾಡುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಶ್ವಾನ ದಾಳಿ ನಡೆದಿತ್ತು. ಆದರೂ ಸ್ಥಳೀಯ ಆಡಳಿತ ಬೀದಿ ನಾಯಿಗಳ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.

ಈ ಹಿಂದೆ ಫೆಬ್ರವರಿಯಲ್ಲಿ ನಾಯಿ ದಾಳಿ ನಡೆದಾಗ ತೆಲಂಗಾಣ ಸಚಿವ ಕೆ.ಟಿ ರಾಮರಾವ್ ಅವರು ಭವಿಷ್ಯದಲ್ಲಿ ನಾಯಿಗಳ ದಾಳಿ ನಡೆಯದಂತೆ ನೋಡಿಕೊಳ್ಳಲು ‘ಪೂರ್ಣ ಸಾಮರ್ಥ್ಯ’ದಲ್ಲಿ ಕೆಲಸ ಮಾಡುವುದಾಗಿ ಹೇಳಿದ್ದರು.