ವಿಜಯಪುರ: ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಸೊಲ್ಲಾಪುರ ಬೈಪಾಸ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.
ಹೊನಮಲ್ಲ ತೆರದಾಳ (31), ಅವರ ಪತ್ನಿ ಗಾಯತ್ರಿ (24) ಮೃತ ನವದಂಪತಿ. ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮೃತ ಹೊನಮಲ್ಲ ಕಳೆದ ಮೇ 22ರಂದು ಗಾಯತ್ರಿಯವರೊಂದಿಗೆ ವಿವಾಹವಾಗಿದ್ದರು. ಮದುವೆಯಾಗಿ 24 ದಿನಗಳಲ್ಲೇ ನವ ಜೋಡಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸಂಬಂಧಿಕರ ಮಕ್ಕಳ ಹುಟ್ಟುಹಬ್ಬಕ್ಕೆ ಹೋಗಿ ವಾಪಸ್ ಬರುವಾಗ ದುರ್ಘಟನೆ ಸಂಭವಿಸಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










