ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ 11:30ರ ವೇಳೆಗೆ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಇದರಿಂದಾಗಿ ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರವಾಸದ ಸಮಯದಲ್ಲಿ ಬದಲಾವಣೆಯಾಗಿದೆ. ಬೆಳಗ್ಗೆ 9:50ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿದ್ದ ಅವರು ಸ್ವಲ್ಪ ತಡವಾಗಿ ದೆಹಲಿಗೆ ತೆರಳಲಿದ್ದಾರೆ.
ಬೆಳಗ್ಗೆ 11:30ಕ್ಕೆ ಹೆಚ್‍ಎಎಲ್‍ನ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ. ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಲಿದ್ದಾರೆ.










