ಕನ್ಯೆ ಸಿಗದೆ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ…

85
firstsuddi

ಹಾವೇರಿ: ಮದುವೆಗೆ ಹೆಣ್ಣು ಸಿಗದೆ ಮನನೊಂದು ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ ರುದ್ರಪ್ಪ ನಾಗನೂರು (36) ಆತ್ಮಹತ್ಯೆ ಮಾಡಿಕೊಂಡ ರೈತ. ಕಳೆದ ಏಳೆಂಟು ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದ ರೈತ ಮಂಜುನಾಥ ಎಂಬುವವರಿಗೆ ಯಾರೊಬ್ಬರೂ ಕನ್ಯೆ ನೀಡಲು ಒಪ್ಪುತ್ತಿರಲಿಲ್ಲ. ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ ಎಂದು ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಸಂಬಂಧ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.