ತೆಲಂಗಾಣ ಶಾಸಕ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ತಪ್ಪಿದ ಭಾರಿ ಅನಾಹುತ…

48
firstsuddi

ಉಡುಪಿ: ತೆಲಂಗಾಣ ಶಾಸಕ ರೋಹಿತ್ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯ್ಯಾರು ಬಳಿ ನಡೆದಿದೆ.

ಶಾಸಕ ರೋಹಿತ್ ರೆಡ್ಡಿ ಮಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದರು. ವೇಗವಾಗಿ ಸಾಗುತ್ತಿರುವ ಹಿನ್ನೆಲೆ ಕಾರಿನ ಟಯರ್ ಸ್ಫೋಟಗೊಂಡು ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಸಚಿವ ರೋಹಿತ್ ರೆಡ್ಡಿ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಕಾರ್ಕಳ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.