ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಸೇರಿದಂತೆ ಒಟ್ಟು 5 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ರಾಣಿ ಕಮಲಾಪತಿ-ಜಬಲ್ಪುರ್ ವಂದೇ ಭಾರತ್ ಎಕ್ಸ್ಪ್ರೆಸ್, ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್ಪ್ರೆಸ್, ಮಡಗಾಂವ್ (ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್, ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ಹಾಗೂ ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್ಪ್ರೆಸ್ ಎಂಬ 5 ರೈಲುಗಳಿಗೆ ಮೋದಿ ಚಾಲನೆ ನೀಡಿದ್ದಾರೆ.
ಈ ರೈಲುಗಳು ಮಧ್ಯಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಗೋವಾ, ಬಿಹಾರ ಮತ್ತು ಜಾರ್ಖಂಡ್ನಲ್ಲಿ ಸಂಪರ್ಕವನ್ನು ಸುಧಾರಿಸುತ್ತದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಮಧ್ಯಪ್ರದೇಶ ರಾಜ್ಯಪಾಲ ಮಂಗುಭಾಯ್ ಪಟೇಲ್, ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಜ್ಯೋತಿರಾದಿತ್ಯ ಸಿಂಧಿಯಾ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.










