ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ…

63
firstsuddi

ಮಂಗಳೂರು: ಯುವಕನೊಬ್ಬ ಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಉಬರಡ್ಕ ಎಂಬಲ್ಲಿ ನಡೆದಿದೆ.

ಅರಂತೋಡು ನಿವಾಸಿ ರವಿ (32) ಮೃತ ಯುವಕ. ಇವರು ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಬಂದಿದ್ದ ಯುವಕ ನಿನ್ನೆ ರಾತ್ರಿ ಮನೆಯಿಂದ ಕೋವಿ ಹಿಡಿದು ಗುಡ್ಡಕ್ಕೆ ಹೋಗಿ ಈ ಕೃತ ಎಸಗಿದ್ದಾರೆ.

ಕೆಲಸಮಯದಿಂದ ಬೆಳ್ರಂಪಾಡಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರವಿ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ರಾತ್ರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸುಳ್ಯ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಾಥಮಿಕ ತನಿಖೆಯು ಇದು ಆತ್ಮಹತ್ಯೆ ಎಂದು ಸೂಚಿಸಿದ್ದು, ಇದಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.