ಮನೆಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ…

65
firstsuddi

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನ ಪ್ರದೇಶವಾದ ಬ್ಯಾಕೋಡು ಸಮೀಪದ ಎಸ್.ಎಸ್. ಬೋಗ್ ಗ್ರಾಮದಲ್ಲಿ ನಡೆದಿದೆ.

ಇಲ್ಲಿನ ಮರಾಠಿ ಗ್ರಾಮದ ಗಣೇಶ್(47) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣೇಶ್ ತಮ್ಮ ಗುಡಿಸಲಿನಲ್ಲಿ ಮಲಗಿದ್ದರು. ಈ ವೇಳೆ ನುಗ್ಗಿದ ಹುಲಿ ದಾಳಿ ನಡೆಸಿದೆ. ಇದರಿಂದಾಗಿ ಗಣೇಶ್ ಅವರ ಬಲಗೈಗೆ ಗಂಭೀರ ಸ್ವರೂಪದ ಗಾಯವಾಗಿದೆ. ಗಣೇಶ್ ಕಿರುಚಾಡಿ ಸಹಾಯಕ್ಕಾಗಿ ಕೂಗಿದ್ದರಿಂದ ಅಕ್ಕಪಕ್ಕದವರು ಆತನನ್ನು ರಕ್ಷಿಸಲು ಮುಂದಾದಾಗ ಹುಲಿ ಓಡಿ ಹೋಗಿದೆ.

ಗಣೇಶ್ ಕೈಗೆ ಬಲವಾಗಿ ಕಚ್ಚಿದ್ದರಿಂದ ರಕ್ತಸ್ರಾವವಾಗಿದೆ. ಕೂಡಲೇ ಗಾಯಾಳುವನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.