ಚಿಕ್ಕಮಗಳೂರು: ಟ್ರಕ್ಕಿಂಗ್ ಹೋಗಿದ್ದ ಪ್ರವಾಸಿಗನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ನಿನ್ನೆ ಜಿಲ್ಲೆಯಲ್ಲಿ ನಡೆದಿದೆ.
ರಕ್ಷಿತ್ (27) ಹೃದಯಾಘಾತದಿಂದ ಮೃತಪಟ್ಟ ಯುವಕನಾಗಿದ್ದಾನೆ. ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ತೆರಳಿದ್ದರು. ಕುದುರೆಮುಖದಿಂದ-ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳುತ್ತಿದ್ದರು. ಪೀಕ್ ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ ಮೃತಪಟ್ಟಿದ್ದಾನೆ.
ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಇದ್ದು, ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಈ ಸ್ಥಳವಿದೆ. ಪೀಕ್ ನಿಂದ ಮೃತದೇಹವನ್ನು ಕಳಸ ಪೊಲೀಸರು ತಂದಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.










