16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ- ಕೊಲೆ ಮಾಡಿ ಶವವನ್ನು ನದಿಗೆ ಎಸೆದ ವ್ಯಕ್ತಿಯ ಬಂಧನ…

69
firstsuddi

ಗುವಾಹಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಶವವನ್ನು ನದಿಗೆ ಎಸೆದಿರುವ ಘಟನೆ ಅಸ್ಸಾಂನ ಗುವಾಹಟಿಯ ಕಮ್ರೂಪ್ (ಮೆಟ್ರೋ)ದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಈ ಬಾಲಕಿ 8ನೇ ತರಗತಿಯಲ್ಲಿ ಓದುತ್ತಿದ್ದು, ಜೂನ್ 26 ರಂದು ತನ್ನ ಮೊಬೈಲ್​​ಗೆ ರೀಚಾರ್ಜ್‌ ಮಾಡಲು ಮೊಬೈಲ್​​ ಶಾಪ್​​ಗೆ ಹೋದವಳು ಮನೆಗೆ ವಾಪಸ್ ಬಂದಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನಂತರ ಜೂನ್ 30 ರಂದು ಆಕೆಯ ಶವ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದ್ದು. ಈ ಸುದ್ದಿ ತಿಳಿದ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಂಡು ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಟೋ ರಿಕ್ಷಾ ಚಾಲಕನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.