ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿ ಮಾಡಿದ ಕಿಚ್ಚ ಸುದೀಪ್.

69
firstsuddi

ಅಭಿನಯ ಚಕ್ರವರ್ತಿ ಸುದೀಪ್ ಅವರು ಸಿನಿಮಾದಲ್ಲಿ ಸಕ್ರಿಯವಾಗಿರುವುದು ಮಾತ್ರವಲ್ಲದೇ ಅನೇಕ ಸಮಾಜಮುಖಿ ಕಾರ್ಯಗಳನ್ನೂ ಮಾಡುತ್ತಾರೆ. ಇದೀಗ ಸುದೀಪ್ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.

ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ಸುದೀಪ್ ಸರ್ ಎಂದರೆ ನನಗೆ ಬಹಳ ಇಷ್ಟ. ‘ರನ್ನ’ ಚಿತ್ರದ ‘ಥಿತಲಿ..’ ಹಾಡು ನನ್ನ ಫೇವರಿಟ್’ ಎಂದಿದ್ದಾರೆ. ಕಿಚ್ಚನ ಈ ಹೃದಯವಂತಿಕೆ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.