9 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತರಿಂದ ಸಾಮೂಹಿಕ ಅತ್ಯಾಚಾರ…

64
firstsuddi

ಕಲಬುರಗಿ: 9 ವರ್ಷದ ಬಾಲಕಿಯ ಮೇಲೆ ನಾಲ್ವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಮಧ್ಯಾಹ್ನ ನಾಲ್ವರು ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್‌ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಘಟನೆ ಸಂಬಂಧ ಕಲಬುರಗಿ ನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.