ಹೃದಯಾಘಾತದಿಂದ ಕರ್ತವ್ಯ ನಿರತ ಎಎಸ್ಐ ಸಾವು!

71
firstsuddi

ತುಮಕೂರು: ಕರ್ತವ್ಯನಿರತ ಎಎಸ್ಐ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿರಾ ಪೊಲೀಸ್ ಠಾಣೆಯಲ್ಲಿ ಇಂದು ನಡೆದಿದೆ.

ಶಿರಾ ಪೊಲೀಸ್ ಠಾಣೆಯಲ್ಲಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಆಗಿದ್ದ ಗಂಗಣ್ಣ (56) ಮೃತರು. ಗಂಗಣ್ಣ ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಮರಣೋತ್ತರ ಪರೀಕ್ಷೆ ಕರ್ತವ್ಯದಲ್ಲಿದ್ದರು. ಈ ವೇಳೆ ಅವರಿಗೆ ಹೃದಯಾಘಾತವಾಗಿದೆ. ತಕ್ಷಣ ಜೊತೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.