ಪತ್ನಿ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಪತಿ…

61
firstsuddi

ಹುಬ್ಬಳ್ಳಿ: ಪತಿಯೊಬ್ಬ ತನ್ನ ಪತ್ನಿಯ ತಲೆಗೆ ಕೊಡಲಿಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿ ನಡೆದಿದೆ.

ಮಂಜುಳಾ ಮೃತ ದುರ್ದೈವಿ. ಪತಿ ಭೀಮಪ್ಪ ಮುತ್ತಲಗಿ ಕೊಲೆ ಆರೋಪಿ. ಭೀಮಪ್ಪ ಮುತ್ತಲಗಿ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ. ಈ ಕುರಿತಂತೆ ಘಟನಾ ಸ್ಥಳಕ್ಕೆ ದಕ್ಷಿಣ ಉಪ ವಿಭಾಗದ ಎಸಿಪಿ ಆರ್.ಕೆ. ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಘಟನಾ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.