ಹೈದರಾಬಾದ್: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದ ಸಿಕಂದರಾಬಾದ್ನಲ್ಲಿ ನಡೆದಿದೆ.
ಮೃತ ವೈದ್ಯಕೀಯ ವಿದ್ಯಾರ್ಥಿಯನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದೆ. ಆತ ಕಳೆದ 4 ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದನು. ಆದರೆ ಭಾನುವಾರ ಲೇಸರ್ ಬ್ಲೇಡ್ ಬಳಸಿ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ವಿದ್ಯಾರ್ಥಿಯ ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಬಗ್ಗೆ ಪೊಲೀಸರು ಪ್ರಸ್ತುತ ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.










