ಮಾಸ್ಟರ್ ಆನಂದ್ ಪುತ್ರಿ ವಂಶಿಕಾ ಹೆಸರಲ್ಲಿ ವಂಚನೆ- ದೂರು ದಾಖಲು…

60
firstsuddi

ಬೆಂಗಳೂರು: ನಟ, ನಿರ್ದೇಶಕ ಮಾಸ್ಟರ್ ಆನಂದ್ ಅವರ ಪುತ್ರಿಯಾದ ಬಾಲನಟಿ ವಂಶಿಕಾ ಹೆಸರಿನಲ್ಲಿ ಜನರನ್ನು ವಂಚಿಸಿರುವ ಆರೋಪದಡಿ ನಿಶಾ ನರಸಪ್ಪ ಎಂಬುವವರ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಂಚನೆ ಬಗ್ಗೆ ವಂಶಿಕಾ ತಾಯಿ ಯಶಸ್ವಿನಿ ದೂರು ನೀಡಿದ್ದಾರೆ. ನಿಶಾ ನರಸಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯಶಸ್ವಿನಿ ಅವರಿಗೆ ಇನ್‌ಸ್ಟಾಗ್ರಾಂ ಮೂಲಕ ಆರೋಪಿ ನಿಶಾ ಎಂಬಾಕೆಯ ಪರಿಚಯವಾಗಿತ್ತು. ಕಾರ್ಯಕ್ರಮವೊಂದಕ್ಕೆ ತಾಯಿ–ಮಗಳನ್ನು ಆರೋಪಿ ಆಹ್ವಾನಿಸಿದ್ದರು. ಇದರಿಂದ ಮತ್ತಷ್ಟು ಹತ್ತಿರವಾಗಿದ್ದರು.

ವಂಶಿಕಾ ಹೆಸರು ಹಾಗೂ ಫೋಟೊಗಳನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ, ‘ಮಕ್ಕಳಿಗೆ ಟಿ.ವಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕೊಡಿಸುತ್ತೇನೆ’ ಎಂದು ಜಾಹೀರಾತು ನೀಡುತ್ತಿದ್ದರು. ಫೋಟೊಶೂಟ್ ಹೆಸರಿನಲ್ಲಿ ಪೋಷಕರಿಂದ ಹಣ ಪಡೆಯುತ್ತಿದ್ದರು. ನಂತರ, ಯಾವುದೇ ಅವಕಾಶ ಕೊಡಿಸದೇ ಜನರನ್ನು ವಂಚಿಸುತ್ತಿದ್ದರು.

ಯಶಸ್ವಿನಿ ಜೊತೆ ಮೋಸ ಹೋಗಿರುವ ಇತರರಿಂದ ನಿಶಾ ವಿರುದ್ಧ ದೂರು ದಾಖಲಿಸಲಾಗಿದೆ. ಸದ್ಯ ಆರೋಪಿ ನಿಶಾರನ್ನ ಪೊಲೀಸರು ಬಂಧಿಸಿದ್ದಾರೆ.