ಭೀಕರ ರಸ್ತೆ ಅಪಘಾತ- ಮೂವರು ಸ್ಥಳದಲ್ಲೇ ಸಾವು…

46
firstsuddi

ಮೈಸೂರು: ಮೈಸೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಪಿರಿಯಾಪಟ್ಟಣ ಬಳಿಯ ಕಂಪಲಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸೌದೆ ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕಂಪಲಾಪುರ ಬಳಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನುಳಿದ ಮೂವರಿಗೆ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.