ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ…

58
firstsuddi

ಶಿವಮೊಗ್ಗ: ಜಿಲ್ಲೆಯ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯ ಹಳೆ ನಂಜಾಪುರದಲ್ಲಿ ಮಾರಕಾಸ್ತ್ರಗಳಿಂದ ತಲೆಗೆ ಹೊಡೆದು ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮುಜೀಬ್(32) ಕೊಲೆಯಾದ ರೌಡಿಶೀಟರ್. ಈತ ಈ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದನು. ನಿನ್ನೆ ರಾತ್ರಿ ಮೃತ ರೌಡಿಶೀಟರ್ ಮನೆಯಿಂದ ಹೊರಬಂದಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ಕುರಿತು ಸ್ಥಳಕ್ಕೆ ಪೇಪರ್​ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನೆಡೆಸಿದ್ದು, ಕೃತ್ಯಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.