ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ…

47
firstsuddi

ಕಾರವಾರ: ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕಕ್ಕೆ ಬಸ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 25ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಅಪಘಾತಗೊಂಡ ಬಸ್ಸಿನಲ್ಲಿ 30 ಜನ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.