ಕಾರ್ಗಿಲ್ ವಿಜಯ್ ದಿವಸ್: ಹುತಾತ್ಮ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ ಮೋದಿ, ಅಮಿತ್ ಶಾ.

74
firstsuddi

ನವದೆಹಲಿ: ಕಾರ್ಗಿಲ್ ಯುದ್ಧದಲ್ಲಿ ವಿಜಯ ಸಾಧಿಸಿದ 24ನೇ ವಾರ್ಷಿಕೋತ್ಸವದ ಅಂಗವಾಗಿ ಹುತಾತ್ಮ ವೀರ ಯೋಧರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗೌರವ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್ ಮಾಡಿ “ಕಾರ್ಗಿಲ್ ವಿಜಯ್ ದಿವಸ್ ಭಾರತದ ಧೈರ್ಯಶಾಲಿಗಳ ವೀರಗಾಥೆ ಸ್ಮರಿಸುತ್ತದೆ. ಕಾರ್ಗಿಲ್ ವೀರಯೋಧರು ಯಾವಾಗಲೂ ದೇಶವಾಸಿಗಳಿಗೆ ಸ್ಫೂರ್ತಿಯಾಗಿ ಉಳಿಯುತ್ತಾರೆ. ವೀರಯೋಧರಿಗೆ ನಮನಗಳು, ಜೈ ಹಿಂದ್” ಎಂದು ಬರೆದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದು, “ಕಾರ್ಗಿಲ್ ವಿಜಯ್ ದಿವಸ್ ಕೋಟ್ಯಂತರ ದೇಶವಾಸಿಗಳ ವಿಜಯದ ದಿನ. ಮಾತೃಭೂಮಿಯನ್ನು ರಕ್ಷಿಸಿದ ಸಮಸ್ತ ವೀರ ಯೋಧರಿಗೆ ನಮನ ಸಲ್ಲಿಸುವ ದಿನ. ಭಾರತ ಮಾತೆಯ ವೀರ ಸೈನಿಕರು ಕಾರ್ಗಿಲ್‍ನ ದುರ್ಗಮ ಬೆಟ್ಟಗಳ ಮೇಲೆ ಹೆಮ್ಮೆಯಿಂದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ದೇಶದ ಸಮಗ್ರತೆಯನ್ನು ಎತ್ತಿ ಹಿಡಿದ ನಿಮ್ಮ ತ್ಯಾಗಕ್ಕೆ ವಂದಿಸುತ್ತೇನೆ” ಎಂದು ಸ್ಮರಿಸಿದ್ದಾರೆ.

2023 ಜುಲೈ 26 ಪ್ರತಿವರ್ಷ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತದೆ. ಇಂದಿಗೆ ಕಾರ್ಗಿಲ್ ಯುದ್ಧ ಸಂಭವಿಸಿ 24 ವರ್ಷವಾಯಿತು. 1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಮಡಿದ ಭಾರತೀಯ ಸೈನಿಕರ ಶೌರ್ಯ ಮತ್ತು ಪರಾಕ್ರಮಕ್ಕೆ ಗೌರವ ಸಲ್ಲಿಸಲು ಪ್ರತಿವರ್ಷ ಜುಲೈ 26 ರಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತದೆ.

1999ರಲ್ಲಿ ಪಾಕಿಸ್ತಾನಿ ಸೈನಿಕರು ಜಮ್ಮು-ಕಾಶ್ಮಿರದಲ್ಲಿ ಗಡಿ ನಿಯಂತ್ರಣಾ ರೇಖೆಯನ್ನು ದಾಟಿ ನಮ್ಮ ಬೆಟ್ಟಗಳನ್ನು ವಶಪಡಿಸಿಕೊಂಡಿದ್ದರು. ಇವರ ವಿರುದ್ಧ ಭಾರತೀಯ ಸೈನಿಕರು ವೀರಾವೇಶದಿಂದ ಹೋರಾಡಿ ವಿಜಯಶಾಲಿಯಾದರು. ಈ ಮಿಲಿಟರಿ ಕಾರ್ಯಾಚರಣೆಗೆ “ಕಾರ್ಗಿಲ್ ಯುದ್ಧ” ಎಂದು ಕರೆಯುತ್ತಾರೆ. ಇಡೀ ಕಾರ್ಯಾಚರಣೆಗೆ ‘ಆಪರೇಷನ್ ವಿಜಯ್’ ಎಂದು ಹೆಸರಿಸಲಾಗಿದೆ.