ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿಟಿ ರವಿ ಅವರನ್ನು ಬಿಡುಗಡೆಗೊಳಿಸಲಾಗಿದೆ. ಆ ಮೂಲಕ ಸಿಟಿ ರವಿ ಬಿಜೆಪಿ ರಾಜ್ಯಾಧ್ಯಕ್ಷರಾಗ್ತಾರಾ? ಎಂಬ ಅನುಮಾನ ಸೃಷ್ಠಿಯಾಗಿದೆ.
2020 ಅಕ್ಟೋಬರ್ ನಲ್ಲಿ ಸಿಟಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. ಈ ಹಿನ್ನಲೆ ಅವರು ಅಂದಿನ ಯಡಿಯೂರಪ್ಪ ನೇತೃತ್ವದ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದರು. ಸಿಟಿ ರವಿ ಹೆಸರು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಬಲವಾಗಿ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಸಿಟಿ ರವಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಕೋಕ್ ನೀಡಿರುವುದು ಸಾಕಷ್ಟು ಅನುಮಾನ ಮೂಡಿದೆ.
ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರದ ಅವಧಿ ಮುಗಿದಿದ್ದು, ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಮುಂದುವರೆಸಲಾಗಿತ್ತು. ಇದೀಗ ಚುನಾವಣೆ ಮುಗಿದಿದ್ದು, ಅಧ್ಯಕ್ಷ ಸ್ಥಾನ ಬದಲಾವಣೆಯಾಗಬೇಕು ಎಂಬ ಮಾತು ಬಿಜೆಪಿ ಪಾಳಯದಲ್ಲೇ ಕೇಳಿಬರುತ್ತಿದೆ. ಹೀಗಾಗಿ ಸಿಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಿಂದ ಕೈಬಿಟ್ಟು, ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಕೂರಿಸಲು ಬಿಜೆಪಿ ಕೇಂದ್ರ ನಾಯಕರು ಸಂಚು ರೂಪಿಸಿದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ.










