ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪೋರ್ಟ್ ಬ್ಲೇರ್ ಬಳಿ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 5.9 ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಭೂಕಂಪದ ಕೇಂದ್ರಬಿಂದು ಪೋರ್ಟ್ ಬ್ಲೇರ್ ನ ಆಗ್ನೇಯಕ್ಕೆ 126 ಕಿ.ಮೀ. ದೂರದಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದೆ. ಭೂಕಂಪನವು ಮಧ್ಯರಾತ್ರಿ 12:53ಕ್ಕೆ ಐಎಸ್‌ಟಿ ಮೇಲ್ಮೈಯಿಂದ 69 ಕಿಮೀ ಆಳದಲ್ಲಿ, 10.75 ಅಕ್ಷಾಂಶ ಮತ್ತು 93.47 ರೇಖಾಂಶದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.










